ಹೊಸದಿಗಂತ ಡಿಜಿಟಲ್ ಡೆಸ್ಕ್:
ಏ.11 ರವರೆಗೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ವಿರೂಪಾಕ್ಷಪ್ಪ ಲೋಕಾಯುಕ್ತ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಏ.11 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಇತ್ತೀಚೆಗೆ ಲೋಕಾಯುಕ್ತ ಪೊಲೀಸರಿಂದ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ, ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿತ್ತು.