ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಳು ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ ನ್ಯಾಯಾಂಗ ಅಧಿಕಾರಿಗಳು ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಸಂವಿಧಾನ ಪೀಠವು ಹಲವಾರು ನಿರ್ದೇಶನಗಳನ್ನು ನೀಡಿದೆ. ಜೊತೆಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಹತೆಯನ್ನು ನಿರ್ಧರಿಸಬೇಕು ಎಂದು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್, ಅರವಿಂದ್ ಕುಮಾರ್, ಎಸ್‌ಸಿ ಶರ್ಮಾ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಪೀಠವು ಅಭಿಪ್ರಾಯಪಟ್ಟಿದೆ.
ಏಳು ವರ್ಷ ವಕೀಲರಾಗಿ ಸೇವೆ ಸಲ್ಲಿಸಿದ ನ್ಯಾಯಾಂಗ ಅಧಿಕಾರಿಗಳು ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಹರು: ಸುಪ್ರೀಂಕೋರ್ಟ್
