ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದತಿ ಹಾಗೂ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 11ರಂದು ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಸೇರಿದಂತೆ ಐವರು ನ್ಯಾಯಾದೀಶರನ್ನೊಳಗೊಂಡ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ನಂತರ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು 20 ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ.
ಈ ಹಿಂದೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಇದೀಗ ಅಲ್ಲಿಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿದೆ ಎಂದು ಈ ಅರ್ಜಿಯಲ್ಲಿ ತಿಳಿಸಲಾಗಿದೆ. ಆ ರಾಜ್ಯ ಸೂಕ್ಷ್ಮ ರಾಜ್ಯವಾಗಿದ್ದು, ಜತೆಗೆ ಅಲ್ಲಿ ಜಾತಿವಾರು, ಪ್ರಾದೇಶಿಕವಾಗಿ ವಿವಾದಗಳಿದ್ದು, ಈ ಸಮಯದಲ್ಲಿ 370 ರದ್ದು ಮಾಡಿರುವುದು ಸರಿಯಲ್ಲ ಎಂದು ಹೇಳಲಾಗಿದೆ.