Friday, August 19, 2022

Latest Posts

ಜುಲೈ 13 ರಂದು ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಜುಲೈ 13 ರಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪ್ರಧಾನಿ ಕಚೇರಿ , ಪ್ರಧಾನ ಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ ಎಂದು ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾಗವಹಿಸಲಿದ್ದಾರೆ. ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಕಿರೆನ್ ರಿಜಿಜು ಇರಲಿದ್ದಾರೆ.
ಭಾರತದಿಂದ 18 ಕ್ರೀಡಾ ವಿಭಾಗಗಳಲ್ಲಿ ಒಟ್ಟು 126 ಕ್ರೀಡಾಪಟುಗಳು ಟೋಕಿಯೊಗೆ ತೆರಳಲಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತದ ಫೆನ್ಸರ್ (ಭವಾನಿ ದೇವಿ) ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ನೇತ್ರಾ ಕುಮಾನನ್ ಅವರು ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಮೊದಲ ಮಹಿಳಾ ನಾವಿಕರಾಗಿದ್ದಾರೆ.
ಸಜನ್ ಪ್ರಕಾಶ್ ಮತ್ತು ಶ್ರೀಹರಿ ನಟರಾಜ್ ಅವರು ಈಜು ಸ್ಪರ್ಧೆಯಲ್ಲಿ ‘ಎ’ ಅರ್ಹತಾ ಮಾನದಂಡ ಸಾಧಿಸುವ ಮೂಲಕ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಈಜುಗಾರರಾಗಿದ್ದಾರೆ.
ಜುಲೈ 17 ರಂದು ಭಾರತೀಯ ತಂಡವು ಟೋಕಿಯೊಗೆ ತೆರಳಲಿದೆ. ಒಲಿಂಪಿಕ್ಸ್ ಕ್ರೀಡಾಕೂಟ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!