ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ ಮತ್ತು ಮಧುರೈನಲ್ಲಿ ನಡೆಯಲಿರುವ ಜೂನಿಯರ್ ಹಾಕಿ ವಿಶ್ವಕಪ್ ನಿಂದ ಪಾಕಿಸ್ತಾನ ತಂಡ ಹಿಂದೆ ಸರಿದಿದೆ.
ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್‌ಐಎಚ್) ಶುಕ್ರವಾರ ಈ ಮಾಹಿತಿ ನೀಡಿದ್ದು, ಪಾಕಿಸ್ತಾನಕ್ಕೆ ಬದಲಿ ತಂಡವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸಿದೆ. ಇತ್ತೀಚೆಗೆ ಏಷ್ಯಾಕಪ್ ಹಾಕಿ ಪಂದ್ಯಾವಳಿಯಿಂದಲೂ ಪಾಕ್ ಹಿರಿಯರ ತಂಡ ಕೊನೆಯ ಹಂತದಲ್ಲಿ ಹಿಂದೆ ಸರಿದಿತ್ತು.
24 ತಂಡಗಳ ಜೂನಿಯರ್ ಹಾಕಿ ವಿಶ್ವಕಪ್‌ನಲ್ಲಿ ಭಾರತ, ಚಿಲಿ ಮತ್ತು ಸ್ವಿಟ್ಜರ್‌ಲ್ಯಾಂಡ್ ಜೊತೆಗೆ ಪಾಕಿಸ್ತಾನ ಒಂದು ಗುಂಪಿನಲ್ಲಿ ಸ್ಥಾನ ಪಡೆದಿತ್ತು. ಇದಕ್ಕೂ ಮೊದಲು, ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ಬದಲು ಬಾಂಗ್ಲಾದೇಶಕ್ಕೆ ಅವಕಾಶ ನೀಡಲಾಗಿತ್ತು. ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹದಗೆಟ್ಟಿರುವ ನಡುವೆ ಭದ್ರತಾ ಕಾಳಜಿಯಿಂದಾಗಿ ಪಾಕಿಸ್ತಾನ ಪಂದ್ಯಾವಳಿಯಿಂದ ಹಿಂದೆ ಸರಿದಿದೆ ಎಂದು ವರದಿಗಳು ತಿಳಿಸಿದೆ.
ನವೆಂಬರ್ 28 ರಿಂದ ಡಿಸೆಂಬರ್ 28 ರವರೆಗೆ ಚೆನ್ನೈ ಮತ್ತು ಮಧುರೈನಲ್ಲಿ ಜೂನಿಯರ್ ಹಾಕಿ ವಿಶ್ವಕಪ್ ನಡೆಯಲಿದೆ.

