ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರ್ಮಿಕ ಪ್ರವಾಸದಲ್ಲಿರುವ ಜೂನಿಯರ್ ಎನ್‌ಟಿಆರ್ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ನಟ ರಿಷಬ್ ಶೆಟ್ಟಿ ಊರಾಗಿರುವ ಕೆರಾಡಿಗೆ ಜೂನಿಯರ್ ಎನ್‌ಟಿಆರ್ ಆಗಮಿಸಿದ್ದಾರೆ. ಈ ವೇಳೆ ಅಮ್ಮನ ಆಸೆ ತೀರಿಸಲು ನಂದಮೂರಿ ತಾರಕ್ ರಾಮ್ ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾಡು, ಬಂಡೆ ನಡುವೆ ಇರುವ ಪ್ರಾಕೃತಿಕ ರಮಣೀಯತೆಗೆ ತಾರಕ್ ಮಾರುಹೋಗಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಜೊತೆಗಿದ್ದರು.