Monday, November 17, 2025

ಬಿಹಾರದಲ್ಲಿ ಚುನಾವಣೆಗೆ ಕೆಲವೇ ದಿನ ಬಾಕಿ: ಜನ್ ಸೂರಾಜ್ ಪಕ್ಷದ ಬೆಂಬಲಿಗ ದಿಢೀರ್ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭಾ ಚುನಾವಣೆಗೆ 6 ದಿನ ಬಾಕಿಯಿರುವ ಜನ್ ಸೂರಾಜ್ ಪಕ್ಷದ ಬೆಂಬಲಿಗರೊಬ್ಬರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಮೃತರನ್ನು ದುಲಾರ್ ಚಂದ್ ಯಾದವ್ ಎಂದು ಗುರುತಿಸಲಾಗಿದೆ. ಅವರು ಜನ್ ಸೂರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ಮಾಡುತ್ತಿದ್ದಾಗ ಸಾವನ್ನಪ್ಪಿದ್ದಾರೆ.

‘ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬುಲೆಟ್ ಗಾಯದಿಂದ ಸಾವನ್ನಪ್ಪಿದ್ದಾರೋ ಅಥವಾ ಆಕಸ್ಮಿಕ ಸಾವೋ ಎಂಬುದು ಪೊಲೀಸರು ಶವ ಪಡೆದ ನಂತರವೇ ತಿಳಿಯಬಹುದ ಎಂದು ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕೇಯ ಕೆ ಶರ್ಮಾ ತಿಳಿಸಿದ್ದಾರೆ.

error: Content is protected !!