ಕೃಷಿಕಾಯ್ದೆಯಂತೆ ʼಅಗ್ನಿಪಥʼವನ್ನೂ ವಾಪಸ್‌ ತೆಗೆದುಕೊಳ್ಳಬೇಕಾಗುತ್ತದೆ : ರಾಹುಲ್‌ ಗಾಂಧಿ ಟ್ವೀಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ರೈತರ ಪ್ರತಿಭಟನೆಯ ನಂತರ ಕೃಷಿಕಾಯ್ದೆಯನ್ನು ಹಿಂತೆಗೆದುಕೊಂಡಂತೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಪ್ರಧಾನಿಯವರು ಕೃಷಿಕಾಯ್ದೆಯನ್ನು ವಾಪಸ್‌ ತೆಗೆದುಕೊಂಡು ರೈತರ ಬಳಿ ಕ್ಷಮೆಯಾಚಿಸಿದಂತೆ ಅಗ್ನಿಪಥವನ್ನೂ ವಾಪಸ್‌ ತೆಗೆದುಕೊಂಡು ಯುವಕರ ಬಳಿ ಕ್ಷಮೆಯಾಚಿಸಬೇಕು ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಗಾ “ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಕಪ್ಪು ಕೃಷಿ ಕಾಯ್ದೆಯನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆಯೂ ಹೇಳಿದ್ದೆ. ಅದೇ ರೀತಿ ಅವರು ‘ಮಾಫಿವೀರ್’ ಆಗುವ ಮೂಲಕ ದೇಶದ ಯುವಕರನ್ನು ಪಾಲಿಸಬೇಕಾಗುತ್ತದೆ ಮತ್ತು ‘ಅಗ್ನಿಪಥ್’ ಅನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಾಗುತ್ತದೆ” ಎಂದು ಬರೆದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!