ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಸುಳಗಾ ಗ್ರಾಮದ ಮನೆಯೊಂದರಲ್ಲಿ ಮೇ 18ರಂದು ಸಿಲಿಂಡರ್ ಸ್ಫೋಟಗೊಂಡಿತ್ತು. ಸಿಲಿಂಡರ್ ಸ್ಫೋಟದಲ್ಲಿ ದಂಪತಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಗಾಯಗೊಂಡಿದ್ದ ದಂಪತಿಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.
ಸಿಲಿಂಡರ್ ಸೋರಿಕೆಯಿಂದ ಲೈಟರ್ ಆನ್ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿತ್ತು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಕಲ್ಲಪ್ಪ ಪಾಟೀಲ್ (67), ಸುಮನ್ ಪಾಟೀಲ್(60) ಗಂಭೀರ ಗಾಯಗೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ಇಬ್ಬರಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರಿಂದು ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಡೆದಿದೆ.