‘ಹೊಸ ವರ್ಷ’ ಸಂಭ್ರಮಕ್ಕೆ ಇನ್ನೆರಡೇ ದಿನ: ಸಿಲಿಕಾನ್ ಸಿಟಿಯಲ್ಲಿದೆ ಖಾಕಿ ಪಡೆಯ ಖಡಕ್ ಕಣ್ಗಾವಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷ ಸಂಭ್ರಮಾಚರಣೆಗೆ ಇನ್ನು ಕೇವಲ ಎರಡೇ ಎರಡು ದಿನ ಬಾಕಿ ಉಳಿದಿರುವಂತೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಕಿ ಪಡೆ ಇನ್ನಷ್ಟು ಹೈ ಅಲರ್ಟ್ ಆಗಿದೆ.
ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಂಭ್ರಮಾಚರಣೆಗೆ ಈ ಬಾರಿ ಯಾವುದೇ ಕೋವಿಡ್ ನಿರ್ಬಂದಗಳು ಇಲ್ಲ.

ಕೋವಿಡ್ ಆತಂಕ ಇರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ. ಹೊಸ ವರ್ಷಾಚರಣೆಗೆ ಅತಿ ಹೆಚ್ಚು ಜನ ಸೇರುವ ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆಗಳಲ್ಲಿನ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗುತ್ತಿದೆ. ಜೊತೆಗ ಡ್ರೋಣ್ ಮೂಲಕ ನಿಗಾ ವಹಿಸಲಾಗುತ್ತಿದೆ ಎಂದಿದ್ದಾರೆ.

ಇನ್ನು ಹಾಟ್ ಸ್ಪಾಟ್ ಎಂದು ಗುರುತಿಸಿಕೊಂಡಿರುವ ಕೋರಮಂಗಲ, ಎಚ್‌ಎಸ್‌ಆರ್ ಲೇಔಟ್, ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಡಿಸಿಪಿ ಸಿ.ಕೆ.ಬಾಬಾ ನೇತೃತ್ವದಲ್ಲಿ ತಯಾರಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!