ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಬಿ.ಆರ್. ಗವಾಯಿ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದಿಸಿದ್ದಾರೆ.

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಭಾರತದ ಸಂವಿಧಾನವು ನೀಡಿರುವ ಅಧಿಕಾರದ ಅಡಿಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

1960ರ ನವೆಂಬರ್‌ 24ರಂದು ಅಮರಾವತಿಯಲ್ಲಿ ಜನಿಸಿದ ಗವಾಯಿ ಅವರು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2003ರ ನವೆಂಬರ್‌ 14ರಂದು ಅಧಿಕಾರ ವಹಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!