ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸರ್ವೋಚ್ಚ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯಮೂರ್ತಿ ಎಂ. ಫಾತಿಮಾ ಬೀವಿ (96) ಅವರು ಗುರುವಾರ ನಿಧನರಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆ ಅವರನ್ನು ಕಳೆದೆರಡು ದಿನಗಳ ಹಿಂದೆ ಕೊಲ್ಲಂ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ನಿಧನ ಹೊಂದಿದ್ದಾರೆ.
ನ್ಯಾಯಮೂರ್ತಿ ಫಾತಿಮಾ ಬೀವಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಮೊದಲ ಮಹಿಳೆ ಮತ್ತು ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
ಕೇರಳದಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ಅವರು, 1989ರಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಸರು ಪಡೆದರು.
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಅವರು ಉನ್ನತ ನ್ಯಾಯಾಂಗದಲ್ಲಿ ಮೊದಲ ಮುಸ್ಲಿಂ ಮಹಿಳೆ ಮತ್ತು ಏಷ್ಯಾದ ದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾದ ಮೊದಲ ಮಹಿಳೆಯಾಗಿದ್ದಾರೆ.