ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಯಡಿಯೂರಪ್ಪರಿಂದ ಮೀಸಲಾತಿಗೆ ಸಂಬಂಧಿಸಿ ಎಲ್ಲರಿಗೂ ನ್ಯಾಯ: ಬೊಮ್ಮಾಯಿ ವಿಶ್ವಾಸ

ಹೊಸ ದಿಗಂತ ವರದಿ, ದಾವಣಗೆರೆ:

ಮೀಸಲಾತಿ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂವಿಧಾನಾತ್ಮಕವಾಗಿ ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಗುರುವಾರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದಲ್ಲಿ ಮೀಸಲಾತಿ ನೀಡುವ ಬಗ್ಗೆ ಉಲ್ಲೇಖವಿದೆ. ಸುಪ್ರೀಂ ಕೋರ್ಟ್ ಆದೇಶವೂ ಇದೆ. ಬೇರೇ ರಾಜ್ಯಗಳಲ್ಲಿ ಇಂತಹ ಪ್ರಕರಣಗಳ ಸಂದರ್ಭದಲ್ಲಿ ಮುಖ್ಯ ತೀರ್ಪುಗಳು ಬಂದಿವೆ. ಎಲ್ಲವನ್ನೂ ಸಿಎಂ ಯಡಿಯೂರಪ್ಪ ಕೂಲಂಕುಷವಾಗಿ ಪರಿಶೀಲಿಸಿ, ಎಲ್ಲಾ ವರ್ಗಕ್ಕೂ ನ್ಯಾಯ ಕೊಡುವ ಮೂಲ ಉದ್ದೇಶದಿಂದ ಹೊರಟಿದ್ದಾರೆ ಎಂದರು.
ಹಿಂದುಳಿದ ವರ್ಗಕ್ಕೆ ಯಾರು ಸೇರಬೇಕೆಂಬ ಬಗ್ಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಧ್ಯಯನ ಮಾಡಿ, ಶಿಫಾರಸ್ಸು ಮಾಡುವ, ಆದೇಶ ಹೊರಡಿಸುವ ಅಧಿಕಾರವು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕಿದೆ. ಭಾರತ ಸರ್ಕಾರದ ಅಧೀನದಲ್ಲಿ ಪರಿಶಿಷ್ಟ ಜಾತಿಗಳ ಆಯೋಗ, ಪರಿಶಿಷ್ಟ ಪಂಗಡಗಳ ಆಯೋಗಗಳಿವೆ. ಈ ಆಯೋಗಗಳು ಇಂತಹ ವಿಚಾರಗಳ ಬಗ್ಗೆ ನಿರಂತರ ಅಧ್ಯಯನ ಮಾಡುವ ಕೆಲಸದಲ್ಲಿ ತೊಡಗಿರುತ್ತವೆ. ನಮ್ಮ ಸರ್ಕಾರದ ಮುಂದೆ ಬಂದ ಎಲ್ಲಾ ವರ್ಗಗಳ ಹಲವಾರು ಅರ್ಜಿಗಳನ್ನು ಆಯೋಗದ ಅಧ್ಯಯನದ ಆಧಾರದ ಮೇಲೆ ಅನುಷ್ಠಾನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನೇಕ ಕಾನೂನು ತಜ್ಞರೊಂದಿಗೂ ಚರ್ಚಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಬದಲಾದ ಪರಿಸ್ಥಿತಿಯಲ್ಲಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಆಧಾರದಲ್ಲಿ ಮೀಸಲಾತಿ ವ್ಯವಸ್ಥೆಯೂ ಬದಲಾಗಬೇಕಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಲೈಸೆನ್ಸ್ ಪಡೆದಿರುವ ಗಣಿಗಾರಿಕೆಯಲ್ಲಿ ನಿಗದಿಗಿಂತಲೂ ಹೆಚ್ಚು ಸ್ಫೋಟಕಗಳ ಬಳಕೆಯಾಗುತ್ತಿದೆ. ಇನ್ನು ಅನಧಿಕೃತ ಕ್ವಾರಿಗಳಲ್ಲಿ ಕಾನೂನು ಬಾಹಿರವಾಗಿಯೇ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಕಲ್ಲು ಕ್ವಾರಿಗಳಲ್ಲಿ ನಿಯಮ ಉಲ್ಲಂಘಿಸಿ ಸ್ಫೋಟಕ ಬಳಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೀಘ್ರವೇ ವಿಶೇಷ ಅಭಿಯಾನದ ಮೂಲಕ 3 ತಿಂಗಳಿಗೊಮ್ಮೆ ಪರಿಶೀಲನೆಯನ್ನು ಇನ್ನು ಮುಂದೆ 15 ದಿನಕ್ಕೊಮ್ಮೆ, ತಿಂಗಳಿಗೊಮ್ಮೆ ಪೊಲೀಸ್ ಹಾಗೂ ಗಣಿ ಮತ್ತು ಭೂ ವಿeನ ಇಲಾಖೆಗಳು ಜಂಟಿಯಾಗಿ ಕೈಗೊಳ್ಳಲಿವೆ ಎಂದು ಅವರು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss