Justice is served : ಆಪರೇಷನ್‌ ಸಿಂಧೂರ ಬೆನ್ನಲ್ಲೇ ಭಾರತೀಯ ಸೇನೆ ಪೋಸ್ಟ್ ವೈರಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ ದಾಳಿಗೆ ಭಾರತ ಪ್ರತ್ಯುತ್ತರ ನೀಡಿದೆ. ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ದಾಳಿಗೆ ಭಾರತ ರಿವೇಂಜ್‌ಗಾಗಿ ಕಾಯುತ್ತಿತ್ತು. ಸಾಕಷ್ಟು ತಯಾರಿ ನಂತರ ಇದೀಗ ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದೆ.

ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯಲ್ಲಿ ಅನೇಕ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ನಂತರ, ಭಾರತೀಯ ಸೇನೆಯು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಜೈ ಹಿಂದ್, ನ್ಯಾಯ ಸಿಕ್ಕಿದೆ (Justice is Served. Jai Hind!) ಎಂದು ಉಲ್ಲೇಖಿಸಿದೆ. ಈ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮೊದಲು, ‘‘ಸೈನ್ಯವು ದಾಳಿ ಮಾಡಲು ಸಿದ್ಧವಾಗಿದೆ, ಗೆಲ್ಲಲು ತರಬೇತಿ ಪಡೆದಿದೆ’’ ಎಂದು ಪೋಸ್ಟ್ ಮಾಡಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!