ಉಪಲೋಕಾಯುಕ್ತ ನ್ಯಾ. ಫಣೀಂದ್ರರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ನ್ಯಾಯಮೂರ್ತಿ ಕೆ.ಎನ್. ಫಣಿಂದ್ರ ಅವರಿಗೆ ಕರ್ನಾಟಕ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!