Wednesday, October 5, 2022

Latest Posts

ಸುಪ್ರೀಂಕೋರ್ಟ್‌ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್‌ ಪ್ರಮಾಣ ವಚನ…

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಪ್ರೀಂಕೋರ್ಟ್‌ನ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ (ಯುಯು ಲಲಿತ್) ಅವರು ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ (ಆಗಸ್ಟ್ 27, 2022), ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಎನ್‌.ವಿ.ರಮಣ ಅವರ ನಿವೃತ್ತಿಯಾದ ಹಿನ್ನೆಲೆಯಲ್ಲಿ 49ನೇ ಸಿಜೆಐ ಆಗಿ ಯುಯು ಲಲಿತ್‌ ಅಧಿಕಾರ ಸ್ವೀಕರಿಸಿದರು.

ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ. ಅಂದರೆ ಅವರು 74 ದಿನಗಳ ಕಾಲ ಮಾತ್ರ ಸಿಜೆಐ ಆಗಿ ಮುಂದುವರಿಯಲಿದ್ದಾರೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಮುಂದಿನ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಸಿಜೆಐ ಎನ್‌ವಿ ರಮಣ ನಿವೃತ್ತಿಯಾದ ಹಿನ್ನೆಲೆಯಲ್ಲಿ ಯುಯು ಲಲಿತ್ ಅವರನ್ನು ಸಿಜೆಐ ಆಗಿ ನೇಮಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್,ನಿವೃತ್ತ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಭಾಗವಹಿಸಿದ್ದರು.

ಮಹಾರಾಷ್ಟ್ರದ ಮೂಲದವರಾದ ಯುಯು ಲಲಿತ್ ಅವರ ಕುಟುಂಬ ಪೂರ್ತಿ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಅವರ ತಾತ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯಕ್ಕೂ ಮುನ್ನವೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಕುಟುಂಬದ 3 ತಲೆಮಾರುಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!