ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಕ್ಷೇತ್ರದಲ್ಲಿ ಆಸ್ಟ್ರೇಲಿಯಾ ಪುರುಷ ತಂಡದ ಹೆಡ್ ಕೋಚ್ ಜಸ್ಟಿನ್ ಲ್ಯಾಂಗರ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಮೂರು ವರ್ಷಗಳಿಗೂ ಹೆಚ್ಚು ಕಾಲ ಕೋಚ್ ಆಗಿ ಹುದ್ದೆ ನಿಭಾಯಿಸಿದ್ದ ಜಸ್ಟಿನ್ ಲ್ಯಾಂಗರ್. ಜಸ್ಟಿನ್ ರಿಂದ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಗೆಲ್ಲುವಂತೆ ಮಾಡಿದ್ದರು.
24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್ ಪ್ರವಾಸ ಕೈಗೊಳ್ಳುತ್ತಿದ್ದು, ಇಲ್ಲಿ ಮೂರು ಟೆಸ್ಟ್ ಪಂದ್ಯ, ಮೂರು ಏಕದಿನ ಪಂದ್ಯ ಹಾಗೂ ಮೂರು ಟಿ 20 ಪಂದ್ಯ ನಡೆಯಲಿದೆ. ಈ ಪಂದ್ಯಾವಳಿಗೂ ಮುನ್ನ ಕೋಚ್ ಲ್ಯಾಂಗರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ತಂಡಕ್ಕೆ ಶಾಕ್ ಆದಂತಾಗಿದೆ.
ಸದ್ಯ ಸಹಾಯಕ ಕೋಚ್ ಆಂಡ್ರೂ ಮೆಕ್ ಡೊನಾಲ್ಡ್ ತಂಡದ ಕೋಚಿಂಗ್ ಜವಾಬ್ದಾರಿ ನಿರ್ವಹಿಸುವ ಸಾಧ್ಯತೆ ಇದೆ.