Wednesday, August 17, 2022

Latest Posts

ನಿಫಾ ವೈರಸ್‌ನಿಂದ ಬಾಲಕ ಸಾವು: ನಿಕಟ ಸಂಪರ್ಕ ಹೊಂದಿದ್ದವರ ವರದಿ ನೆಗೆಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಿಫಾ ವೈರಸ್ ಸೋಂಕಿನಿಂದ ಮೃತಪಟ್ಟ ಬಾಲಕನ ನಿಕಟ ಸಂಪರ್ಕ ಹೊಂದಿದ್ದ 8 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಎಂಟು ಮಂದಿಯ ವರದಿ ಈಗಷ್ಟೇ ಬಂದಿದ್ದು, ನಿಫಾ ವೈರಸ್ ನೆಗೆಟಿವ್ ಆಗಿದೆ. ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದೇವೆ. ಇನ್ನೂ ಹಲವರ ಪರೀಕ್ಷೆ ಮಾಡಿಸಬೇಕಿದೆ ಎಂದಿದ್ದಾರೆ.
ಬಾಲಕನ ನಿಕಟ ಸಂಪರ್ಕಕ್ಕೆ ಬಂದ ಪೋಷಕರು, ಆರೋಗ್ಯ ಕಾರ್ಯಕರ್ತರಿಗೆ ಸೋಂಕಿನ ಲಕ್ಷಣ ಕಾಣಿಸಿತ್ತು. ಮಾದರಿ ಸಂಗ್ರಹಿಸಲಾಗಿದ್ದು, ಇಂದು ವರದಿ ನೆಗೆಟಿವ್ ಬಂದಿದೆ.
ಇನ್ನು 48 ಮಂದಿಗೆ ಸೋಂಕು ತಗುಲಿರುವ ಸಾಧ್ಯತೆ ಇದ್ದು, ಅವರನ್ನು ಪ್ರತ್ಯೇಕಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!