ಖುದ್ದು ಹಕ್ಕು ಚಲಾಯಿಸಿ ಇತರರಿಗೂ ಮತದಾನ ಮಾಡಲು ಕರೆ ನೀಡಿದರು ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸುವ ಮೂಲಕ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಖುಷಿಯ ನಗೆ ಬೀರಿದ್ದಾರೆ!

ಮಹಾರಾಷ್ಟ್ರದ ನಾಗ್ಪುರದಲ್ಲಿ ತಮ್ಮ ಮನೆಮಂದಿಯೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ ಜ್ಯೋತಿ, ಇದೇ ಸಂದರ್ಭ ಎಲ್ಲರೂ ಮತ ಚಲಾಯಿಸುವಂತೆ ಮನವಿ ಕೂಡಾ ಮಾಡಿದ್ದಾರೆ. ಪ್ರತಿಯೊಬ್ಬ ಮತದಾರರು ತಮ್ಮ ಮತವನ್ನು ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಏಕೆಂದರೆ ಅದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.

30 ವರ್ಷ ವಯಸ್ಸಿನ ಜ್ಯೋತಿ, ಕೇವಲ 62.8 ಸೆಂ.ಮೀ ಎತ್ತರ ಇದ್ದು, ಇದೇ ಕಾರಣಕ್ಕೆ ಅವರನ್ನು 2011ರಲ್ಲಿ ವಿಶ್ವದ ಕುಬ್ಜ ಮಹಿಳೆ ಎಂದು ಗಿನ್ನಿಸ್ ಸಂಸ್ಥೆ ಘೋಷಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!