ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಜ್ಯೋತಿರಾದಿತ್ಯ ಸಿಂಧ್ಯಾ ಅವರು, ತಮ್ಮ ತವರು ರಾಜ್ಯ ಮಧ್ಯಪ್ರದೇಶದ ಜನರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಉಡಾನ್ ಯೋಜನೆಯಲ್ಲಿ ಮಧ್ಯಪ್ರದೇಶದಲ್ಲಿ ಜುಲೈ 16ರಿಂದ ಹೊಸದಾಗಿ 8 ವಿಮಾನಗಳು ಸಂಚಾರ ಆರಂಭಿಸಲಿವೆ. ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ-ಸೂರತ್-ಜಬಲ್ಪುರ, ಅಹಮದಾಬಾದ್-ಗ್ವಾಲಿಯರ್ ಅಹಮದಾಬಾದ್ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಹೊಸ ವಿಮಾನಗಳನ್ನು ಸ್ಪೈಸ್ ಜೆಟ್ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
ದೇಶದ ನಾಗರಿಕ ವಿಮಾನಯಾನ ಸಚಿವಾಲಯವು ಮತ್ತು ವಾಯುಯಾನ ಉದ್ಯಮವು ಉಡಾನ್ ಯೋಜನೆಯನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ವಿಚಾರವನ್ನು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.