Tuesday, June 28, 2022

Latest Posts

ಬಬ್ರುವಾಹನ ಖ್ಯಾತಿಯ ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆ. ಸಿ. ಎನ್. ಚಂದ್ರಶೇಖರ್ ನಿಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಬ್ರುವಾಹನ ಖ್ಯಾತಿಯ ಸ್ಯಾಂಡಲ್‌ವುಡ್ ನ ಹಿರಿಯ ನಿರ್ಮಾಪಕ ಕೆ.ಸಿ.ಎನ್. ಚಂದ್ರಶೇಖರ್ ನಿಧನರಾಗಿದ್ದಾರೆ.

69 ವರ್ಷದ ಚಂದ್ರಶೇಖರ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಅವರ ನಿವಾಸದಲ್ಲಿ ಇಂದು ಬೆಳಗ್ಗೆ ೯ ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಹಿಟ್ ಸಿನಿಮಾ ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಅನೇಕ ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss