spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೆ.ಸಿ. ನಾರಾಯಣಗೌಡ ಸಚಿವರಾಗಿ ಪ್ರಮಾಣ ವಚನ: ಮಂಡ್ಯದಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಡ್ಯ:

ಕೆ.ಸಿ.ನಾರಾಯಣಗೌಡ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕ ಹಿನ್ನೆಲೆಯಲ್ಲಿ  ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು.
ಬಿಜೆಪಿ ಮುಖಂಡ ಡಿ.ನಾಗೇಶ್ ನೇತೃತ್ವದಲ್ಲಿ ಮಹಾವೀರ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಹಾಗೂ ಕೆಸಿಎನ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ಡಿ.ನಾಗೇಶ್ ಅವರು, ಜಿಲ್ಲೆಯಲ್ಲಿ ಪ್ರಥಮವಾಗಿ ಕಮಲ ಬಾವುಟ ಹಾರಿಸುವ ಮೂಲಕ ಬಿಜೆಪಿಯ ಬಲವರ್ಧನೆಗೆ ಹಗಲಿರುಳು ಶ್ರಮಿಸುತ್ತಿರುವ ಕೆ.ಸಿ.ನಾರಾಯಣಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ ಎಂದರು.
ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಕೆ.ಸಿ.ನಾರಾಯಣಗೌಡ ಅವರಿಗೆ ಪ್ರಮುಖ ಖಾತೆಯ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವೂ ಸಿಗುವ ನಂಬಿಕೆಯಿದೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಕ್ಕಿದರೆ ಜಿಲ್ಲೆಯಲ್ಲಿ ಮತ್ತಷ್ಟು ಬಿಜೆಪಿಯನ್ನು ಬಲಗೊಳಿಸಬಹುದು ಎಂದು ಹೇಳಿದರು.
ಈ ಸಂದರ್ಭ ಮುಖಂಡರಾದ ಸಾಯಿ ಟ್ರ್ಯಾಕ್ಟರ್ ರವೀಂದ್ರ, ಶಿವಕುಮಾರ ಆರಾಧ್ಯ, ಹೊಸಹಳ್ಳಿ ಶಿವು ಇತರರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss