spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

“ಕಾವೇರಿ ತೀರ್ಥೋದ್ಭವ: ಜಿಲ್ಲೆಯ ಭಕ್ತಾದಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಿ”

- Advertisement -Nitte

ಹೊಸದಿಗಂತ ವರದಿ, ಕೊಡಗು:

ನಾಡಿನ ಜೀವನದಿ ‘ಕಾವೇರಿ’ ಉಗಮ ಸ್ಥಾನ ತಲಕಾವೇರಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸುವ ಪವಿತ್ರ ತೀರ್ಥೋದ್ಭವದ ಸಂದರ್ಭ ಕೊಡಗಿನ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಶಾಸಕ‌ ಕೆ.ಜಿ.ಬೋಪಯ್ಯ ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಉಪ ಪೊಲೀಸ್ ಅಧೀಕ್ಷಕ ಗಜೇಂದ್ರ ಪ್ರಸಾದ್ ಅವರು ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಹೋಂ ಗಾರ್ಡ್ ಸೇರಿದಂತೆ 500 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಭಾಗಮಂಡಲ ಗ್ರಾ,ಪಂ.ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್, ತಲಕಾವೇರಿ ಮತ್ತು ಭಾಗಮಂಡಲ ಭಗಂಡೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಎಇಇ ಶಿವರಾಮು, ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಮೇದಪ್ಪ, ಅನೂಪ್ ಮಾದಪ್ಪ, ಮಹದೇವ್, ತಾ.ಪಂ.ಇಒ ಶೇಖರ್, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ಸಹಾಯಕ ನಿರ್ದೇಶಕ ವಿರೂಪಾಕ್ಷ, ತಲಕಾವೇರಿ ಭಾಗಮಂಡಲ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ನಾನಾ ಇಲಾಖೆಯ ಅಧಿಕಾರಿಗಳು ಇದ್ದರು.
ಜಿಲ್ಲಾಧಿಕಾರಿ ಭೇಟಿ: ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಭಕ್ತಾದಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಅವರು ಸಲಹೆ ಮಾಡಿದರು. ಬಳಿಕ ತಲಕಾವೇರಿಗೆ ಭೇಟಿ ವೀಕ್ಷಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಕಾರಿ ಈಶ್ವರ್ ಕುಮಾರ್ ಖಂಡು ಮತ್ತಿತರ ಅಧಿಕಾರಿಗಳು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss