ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ,ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ನಿನ್ನೆ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದು, ಇಂದು ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ರಾಜಾಜಿನಗರದ ಕೆ. ಶಿವರಾಂ ಅವರ ನಿವಾಸದಲ್ಲಿ ಸದ್ಯ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತದನಂತರ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ರವಾನಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆವರೆಗೆ ಅಂತಿಮ ದರುಶನಕ್ಕೆ ಅವಕಾಶ ನೀಡಲಾಗಿದ್ದು, ಸಂಜೆ ವಿಧಿ ವಿಧಾನಗಳಂತೆ ಶಿವರಾಮ್ ಅಂತ್ಯಕ್ರಿಯೆ ನಡೆಯಲಿದೆ.