ದಿಗಂತ ವರದಿ ಹುಬ್ಬಳ್ಳಿ:
ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಮಂಗಳವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಸಭಾಪತಿ ಹೊರಟ್ಟಿ ಅವರು ಸ್ವೀಕರಿಸಿದರು. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಕೆ.ಪಿ. ನಂಜುಂಡಿ ಗುರುತಿಸಿಕೊಂಡಿದ್ದರು.
ರಾಜೀನಾಮೆ ಸಲ್ಲಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸಮಾಜದ ಉಳಿವಿಗಾಗಿ ನಾನು ರಾಜಕೀಯಕ್ಕೆ ಬಂದಿದ್ದೆ. ಬಿಜೆಪಿ ಅವರು ಹಿಂದೂಳಿದ ವರ್ಗದವರ ಧ್ವನಿಯಾಗಿ ನನ್ನ ಬಳಸಿಕೊಳ್ಳುವರು ಎಂಬ ವಿಶ್ವಾಸವಿತ್ತು. ಆದರೆ ಹುಸಿಯಾಗಿದೆ ಎಂದು ಹೇಳಿದರು.
ಕೇವಲ ಎಂಎಲ್ ಸಿ ಸ್ಥಾನದಿಂದ ಸಮಾಜ ಸುಧಾರಣೆ ಮಾಡಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಬಗ್ಗೆ ಏನು ಮಾತನಾಡಲು ಇಷ್ಟ ಪಡಲ್ಲ. ಆದರೆ ಪಕ್ಷದಲ್ಲಿ ನನ್ನನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ. ನಾಳೆ ಕಾಂಗ್ರೆಸ್ ಗೆ ಸೇರುತ್ತೇನೆ ಎಂದು ಹೇಳಿದರು.