ಕೆ.ಎಸ್. ಆಸ್ಪತ್ರೆಗೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಜಿ.ವಿ.ರಾಜೇಶ್ ಭೇಟಿ

ಹೊಸದಿಗಂತ ವರದಿ,ಕೊಪ್ಪಳ:

ನಗರದಲ್ಲಿರುವ ಕೆ.ಎಸ್.ಆಸ್ಪತ್ರೆಗೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಜಿ.ವಿ ರಾಜೇಶ ಅವರು ಭೇಟಿ ನೀಡಿದರು.

ಆಸ್ಪತ್ರೆ ಮುಖ್ಯಸ್ಥರು ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕೆ.ಎಸ್. ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ವಿಭಾಗ ಸಂಘಟನಾ ಸಹ ಪ್ರಭಾರಿ ಚಂದ್ರಶೇಖರ ಪಾಟೀಲ ಹಲಗೇರಿ ,ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಶಿವುಕುಮಾರ ಅರಕೇರಿ,ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಮಾಲಿಪಾಟೀಲ ಹಾಗೂ ಪಕ್ಷದ ಪ್ರಮುಖರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here