ಹೊಸದಿಗಂತ ಡಿಜಿಟಲ್ ಡೆಸ್ಕ್
ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಪಂಜಾಬ್ನ ಜಲಂಧರ್ನ ಮಲಿಯನ್ ಎಂಬ ಹಳ್ಳಿಯಲ್ಲಿ ನಡೆದ ಕಬಡ್ಡಿ ಟೂರ್ನಿಯಲ್ಲಿ ಭಾಗಿಯಾಗಿದ್ದ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ವಾಹನ ಹಾಗೂ ಮರಗಳ ಮರೆಯಲ್ಲಿ ಅಡಗಿಕೊಂಡಿದ್ದ ಹಂತಕರು ಸಂದೀಪ್ ತಲೆ ಮತ್ತು ಮತ್ತು ಎದೆ ಮೇಲೆ ಸುಮಾರು 20 ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಸಂದೀಪ್ ಅಭಿಮಾನಿಗಳಿಂದ ಗ್ಲಾಡಿಯೇಟರ್ ಎಂದು ಕರೆಸಿಕೊಳ್ಳುತ್ತಿದ್ದರು. ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಕಬಡ್ಡಿ ಜಗತ್ತನ್ನು ಆಳಿದ್ದಾರೆ. ಸಂದೀಪ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಸಾವನ್ನಪ್ಪಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ