Saturday, April 1, 2023

Latest Posts

ಕಬಡ್ಡಿ ಆಟಗಾರ್ತಿ ಮೇಲೆ ಕೋಚ್ ಅತ್ಯಾಚಾರ, ಬೆದರಿಕೆ: ದೆಹಲಿ ಪೊಲೀಸರಿಂದ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇತ್ತೀಚೆಗಷ್ಟೇ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರು ಹಾಗೂ ತರಬೇತುದಾರರ ವಿರುದ್ಧ ಅಥ್ಲೀಟ್‌ಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದು ಗೊತ್ತೇ ಇದೆ. ಈ ವಿಚಾರ ಮಾಸುವ ಮುನ್ನವೇ ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಸ್ವತಃ ಕೋಚ್ ಕಬಡ್ಡಿ ಆಟಗಾರ್ತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಸದ್ಯ ತನಿಖೆ ನಡೆಯುತ್ತಿದೆ. ಸಂತ್ರಸ್ತೆ ಈ ಹಿಂದೆ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದರು. ಅತ್ಯಾಚಾರ ಘಟನೆಯ ಕುರಿತು ದ್ವಾರಕಾದ ಬಾಬಾ ಹರಿದಾಸ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರ ಪ್ರಕಾರ, 2012 ರಲ್ಲಿ, ಸಂತ್ರಸ್ತೆ ಹಿರಂಕುಡ್ನಾದಲ್ಲಿ ಕಬಡ್ಡಿ ಆಟದಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿದ್ದರು. ಅದಾದ ಬಳಿಕ 2015ರಲ್ಲಿ ಕೋಚ್ ಜೋಗಿಂದರ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ತನ್ನ ಒಪ್ಪಿಗೆಯಿಲ್ಲದೆ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಿದ್ದಾಳೆ. ಅಲ್ಲದೆ 2018ರಲ್ಲಿ ಪಡೆದ ಬಹುಮಾನದ ಹಣದಲ್ಲಿ ಪಾಲು ನೀಡುವಂತೆ ಬೆದರಿಸಿದ್ದರಿಂದ ಅವರ ಬ್ಯಾಂಕ್ ಖಾತೆಗೆ 43.5 ಲಕ್ಷ ರೂ. ಜಮಾ ಕೂಡಾ ಮಾಡಿದ್ದರಂತೆ.

ಸಂತ್ರಸ್ತೆ 2021 ರಲ್ಲಿ ವಿವಾಹವಾದರೂ ಬಿದಡೆ ಜೋಗಿಂದರ್ ಮತ್ತೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಖಾಸಗಿ ಫೋಟೋಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ದೂರಿದ್ದಾರೆ. ಅತ್ಯಾಚಾರ ಘಟನೆಯ ಬಗ್ಗೆ ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾಳೆ. ಪೊಲೀಸರು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಸದ್ಯ ಆರೋಪಿ ಜೋಗಿಂದರ್ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಡಿಸಿಪಿ ಹರ್ಷವರ್ಧನ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!