ಸಿನಿಮಾ ಬಿಡುಗಡೆಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ ‘ಕಬ್ಜ’ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಆರ್‌.ಚಂದ್ರು ನಿರ್ದೇಶನದ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ನಾಳೆ (ಮಾರ್ಚ್ 17) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ಭರ್ಜರಿ ಪ್ರಚಾರವನ್ನೂ ಮಾಡಲಾಗಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸಖತ್ ಸದ್ದು ಮಾಡಿದ್ದು, ಸಿನಿಮಾ ಕಣ್ತುಂಬಿಕೊಳ್ಳಲು ವೀಕ್ಷಕರು ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಸ್ಟಾರ್‌ ನಟರಾದ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದು, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ಸಿನಿಮಾ ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗ ‘ಕಬ್ಜ’ ತಂಡ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದೆ. ‘ಕಬ್ಜ’ ಸಿನಿಮಾದ ಲೀಡ್ ಹೀರೊ ಉಪೇಂದ್ರ, ನಿರ್ದೇಶಕ ಆರ್ ಚಂದ್ರು, ‘ಯುಐ’ ಸಿನಿಮಾದ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸೇರಿದಂತೆ ಹಲವು ಆತ್ಮೀಯರು ಚಾರ್ಟರ್ಡ್ ಫ್ಲೈಟ್ ಮೂಲಕ ತಿರುಪತಿಗೆ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!