ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕನ್ನಡದ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಓಟಿಟಿಗೆ ಬರಲು ಸಜ್ಜಾಗಿದೆ.
ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ʼಕಬ್ಜʼ ಸಿನಿಮಾ ರಿಲೀಸ್ ಆಗಿತ್ತು. ಮೊನ್ನೆಗೆ ಕಬ್ಜ ರಿಲೀಸ್ ಆಗಿ 25 ದಿನಗಳನ್ನು ಪೂರೈಸಿದ್ದು, 50ನೇ ದಿನದತ್ತ ಮುನ್ನುಗ್ಗಿದೆ. ಈ ಮಧ್ಯೆಯೂ ಸಿನಿಮಾ ಏಪ್ರಿಲ್ 14 ರಂದು ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಲಭ್ಯವಾಗಲಿದೆ.
ಕಾಂತಾರ ಚಿತ್ರದ ನಂತರ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿರುವ ಕಬ್ಜ ಚಿತ್ರ, ಈ ಮೂಲಕ ಆರ್.ಚಂದ್ರುಗೆ ಮತ್ತೊಂದು ಹಂತದ ಯಶಸ್ಸನ್ನು ತಂದುಕೊಟ್ಟಿದೆ.
ಭಾರತೀಯ ಚಿತ್ರರಂಗವೇ ಮಾತಾಡುವಂತಹ ನಿರ್ದೇಶಕರ ಪಟ್ಟಿಯಲ್ಲಿ ಚಂದ್ರು ಕಾಣಿಸಿಕೊಂಡಿದ್ದಾರೆ. ಈ ಕಾರಣದಿಂದಾಗಿಯೇ ಕಬ್ಜ 2 ಬಗ್ಗೆ ಈಗಾಗಲೇ ಮಾತುಗಳು ಶುರುವಾಗಿವೆ. ಈ ಚಿತ್ರದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿ ಮೂಡಿದೆ.