ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಡಾನೆಗಳ ದಾಳಿಯಿಂದಾಗಿ ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ತೋಟಗಳಿಗೆ ಹೋಗದಂತೆ ಗ್ರಾಮಸ್ಥರಿಗೆ ಸೂಚಿಸಿದ್ದಾರೆ. ಆನೆಗಳನ್ನು ಕಾಡಿಗೆ ಮರಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಚಿಕ್ಕಮಗಳೂರಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿರುವುದರಿಂದ ಜನ ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲೂರುಪುರ, ಹೊಸಹಳ್ಳಿ, ತೋರಣಮಾವು, ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.