Monday, October 2, 2023

Latest Posts

ಕಾಡುಗಳ್ಳ ವೀರಪ್ಪನ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ : ‘ಮಾವೀರನ್​ ಪಿಳ್ಳೈ’ ಚಿತ್ರದಲ್ಲಿ ವಿಜಯಲಕ್ಷ್ಮೀ ನಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಒಂದು ಕಾಲದಲ್ಲಿ ಇಡೀ ದೇಶವನ್ನೇ ನಡುಗಿಸಿದ ಕಾಡುಗಳ್ಳ ವೀರಪ್ಪನ್‌ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅದೇ ವೀರಪ್ಪನ್‌ ಪುತ್ರಿ ವಿಜಯಲಕ್ಷ್ಮೀ ಸಿನಿಮಾರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ʼಮಾವೀರನ್‌ ಪಿಳ್ಳೈʼ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ವಿಜಯಲಕ್ಷ್ಮೀ ಅವರ ಸಿನಿಮಾ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಇತ್ತೀಚೆಗೆ ಸಿನಿಮಾದ ಹಾಡುಗಳು ಬಿಡುಗಡೆಯಾಗಿದ್ದವು.

ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷೆಯಾಗಿರುವ ವಿಜಯಲಕ್ಷ್ಮೀ ಸಿನಿಮಾರಂಗದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಚೆನ್ನೈನ ಪ್ರಸಾದ್‌ ಲ್ಯಾಬ್​ನಲ್ಲಿ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ವೀರಪ್ಪನ್​ ಪತ್ನಿ ಮುತ್ತುಲಕ್ಷ್ಮೀ, ಆಲ್​ ಪೀಪಲ್ಸ್​ ಪೊಲಿಟಿಕಲ್​ ಪಾರ್ಟಿ ಅಧ್ಯಕ್ಷೆ ರಾಜೇಶ್ವರಿ ಪ್ರಿಯಾ, ನಟ ಕೂಲ್​ ಸುರೇಶ್​, ನಿರ್ದೇಶಕ ಪೇರರಸು, ನಿರ್ಮಾಪಕ ಕೆ.ಎನ್.​ಆರ್.​ ರಾಜ ಮೊದಲಾದವರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!