ಕಾಂಗ್ರೆಸ್‌ಗೆ ಬಂಡಾಯದ ಬಿಸಿ: ʻಕೈʼಕೊಟ್ಟು ʻಕಮಲʼ ಹಿಡಿದ ಕಾಗೋಡು ತಿಮ್ಮಪ್ಪ ಪುತ್ರಿ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ವಿಧಾಸಭೆ ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ಪಕ್ಷಗಳ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ತಲೆ ಬಿಸಿಯಾಗಿದೆ. ಮೂರು ಪಕ್ಷಗಳಲ್ಲಿ ಟಿಕೆಟ್‌ ಸಿಗದವರು ಬಂಡಾಯವೆದ್ದು ಬೇರೆ ಪಕ್ಷಗಳಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್‌ಗೆ ʻಕೈʼಕೊಟ್ಟು ಬಿಜೆಪಿ ಸೇರಿದ್ದಾರೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಪುತ್ರಿ.

ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಜೊತೆಗೆ ಹಲವು ಮುಖಂಡರು ಹಾಜರಿದ್ದರು. ರಾಜನಂದಿನಿಗೆ ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಸ್ವಾಗತಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜನಂದಿನಿ, ಸಾಗರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ. ಕಾಗೋಡು ತಿಮ್ಮಪ್ಪ ಕೂಡ ತಮ್ಮ ಮಗಳಿಗೆ ಟಿಕೆಟ್ ಕೊಡಿಸಲು ಶತಾಯಗತಾಯ ಪ್ರಯತ್ನ ಮಾಡಿದ್ದರು. ಆದರೂ ಅವರ ಪ್ರಯತ್ನಗಳೆಲ್ಲ ವಿಫಲವಾಗಿ ಟಿಕೆಟ್‌ ನೀಡದ ಕಾರಣ ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಅದರ ಬೆಳವಣಿಗೆಯಾಗಿ ಇಂದು ರಾಜನಂದಿನಿ ಬಿಜೆಪಿ ಸೇರಿದ್ದಾರೆ.

ಇದಕ್ಕೂ ಮುನ್ನ ಬಿಎಸ್‌ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!