ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಹೈ ಡ್ರಾಮಾ ನಡೆದಿದೆ.
ಕೋಲಾರದಲ್ಲಿಯೇ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದು, ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ನಿವಾಸದ ಮುಂದೆ ಸಾಕಷ್ಟು ಕಾರ್ಯಕರ್ತರು ಜಮಾಯಿಸಿದ್ದು, ಶರ್ಟ್ ತೆಗೆದು ಬಾರೆಕೋಲಿನಿಂದ ಅಭಿಮಾನಿಗಳು ಮೈಗೆ ಹೊಡೆದುಕೊಂಡು ಬೆಂಬಲ ಸೂಚಿಸಿದ್ದಾರೆ.