ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಭದ್ರಕೋಟೆ ಎಂದೇ ಹೆಸರಾಗಿರುವ ಕರಾವಳಿ ಭಾಗದಲ್ಲಿ ನೆಲೆಯೂರಲು ಕಾಂಗ್ರೆಸ್ ಯೋಜನೆಗಳನ್ನು ರೂಪಿಸಿದೆ. ಲೋಕಸಭೆ ಸಮರದಲ್ಲಿ ಬಿಜೆಪಿಯ ಮುಷ್ಟಿಯಿಂದ ಕರಾವಳಿ ಭಾಗವನ್ನು ಕಿತ್ತುಕೊಳ್ಳಲು ಕಾಂಗ್ರೆಸ್ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ಸೋಲಿಸಲು ಕಠಿಣ ತಂತ್ರ ರೂಪಿಸುತ್ತಿದೆ. ಇದೀಗ ಕರಾವಳಿಯ ಸ್ಥಳೀಯ ಸಮುದಾಯಗಳ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.
ಜಾತಿ ಗಣತಿ ವರದಿ ಸಲ್ಲಿಸಿದ ನಂತರ ಹಿಂದುಳಿದ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಜಯಪ್ರಕಾಶ್ ಹೆಗ್ಡೆ ರಾಜೀನಾಮೆ ನೀಡಿದ್ದರು. ಇದೀಗ ಚುನಾವಣಾ ಕಣಕ್ಕೆ ಮರಳಿ ಬರಲಿದ್ದಾರೆ ಎಂಬ ಮಾಹಿತಿ ಇದೆ. ಲೋಕಸಭೆಯ ಕದನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.