ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ “ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಲ್ಲಿ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ಯಾವ ಕ್ಷಣದಲ್ಲಾದರೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು” ಎಂದು ಬಿ.ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.