Saturday, December 13, 2025

ದೆಹಲಿಯತ್ತ ಹೊರಟ ‘ಕೈ’ ನಾಯಕರು: ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಲಿದ್ದಾರೆ.

ಇನ್ನು ನಾಳೆ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ನೆಪದಲ್ಲಿ ಇಬ್ಬರು ನಾಯಕರನ್ನು ದೆಹಲಿ ಕರೆಸಿಕೊಂಡರಾ ಅನ್ನೋ ಚರ್ಚೆ ಶುರುವಾಗಿದೆ.

ದೇಶದ ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ವೋಟ್ ಚೋರಿ ನಡೆದಿದೆ ಅಂತಾ ಕಾಂಗ್ರೆಸ್ ಸಮರ ಸಾರಿದೆ. ಇದೀಗ ಎರಡನೇ ಹಂತದ ವೋಟ್ ಚೋರಿ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ನಾಳೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಅಭಿಯಾನ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗವಹಿಸಲಿದ್ದಾರೆ.

ಇದೇ ವೇಳೆ ಮಂಡ್ಯ ನಾಯಕರ ಟೀಂ ದಿಲ್ಲಿ ಯಾತ್ರೆ ಕೈಗೊಂಡಿದೆ. ಚಲುವರಾಯಸ್ವಾಮಿ ನೇತೃತ್ವದಲ್ಲಿ ತಂಡ ದೆಹಲಿಗೆ ತೆರಳುವ ಪ್ಲ್ಯಾನ್ ಇತ್ತು. ಆದರೆ ಅನಾರೋಗ್ಯದ ಕಾರಣ ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿಲ್ಲ. ಉಳಿದಂತೆ ಶಾಸಕರುಗಳಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ದೆಹಲಿಗೆ ತೆರಳಿದ್ದಾರೆ.

error: Content is protected !!