ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವದಕ್ಕೆ ಕೈ ನಾಯಕರ ಪ್ರತಿಕ್ರಿಯೆ ಸಾಕ್ಷಿ: ಬೊಮ್ಮಾಯಿ

ಹೊಸ ದಿಗಂತ ವರದಿ, ಗದಗ:

ಎಲ್ಲವೂ ಸರಿ ಇದೆ ಎಂದು ಹೇಳುತ್ತಾ ಒಳಗಡೆಯಿಂದ ದೋಣಿಗೆ ತೂತು ಕೊರೆಯುವುದು ರಾಜಕಾರಣ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿರೇಂದ್ರ ಪಾಟೀಲರು ಅತ್ಯಂತ ಬಲಿಷ್ಠ ಮುಖ್ಯಮಂತ್ರಿಗಳು ಆದರೆ, ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದಲಾದರು. ಮುಂದೆ ದೇವರಾಜ ಅರಸು ಎರಡನೇ ಬಾರಿ ಸ್ವಂತ ಶಕ್ತಿಯಲ್ಲಿ‌ ಆರಿಸಿ ಸಿಎಂ ಆದರು ರಾತ್ರೋರಾತ್ರಿ ಬದಲಾವಣೆ ಮಾಡಿ ಗುಂಡೂರಾವ್ ಅವರು ಮುಖ್ಯಮಂತ್ರಿಗಳಾದರು. ಬಂಗಾರಪ್ಪ ಅವರಿಗೆ 183 ಶಾಸಕರ ಬಲವಿದ್ದರೂ ಸಿಎಂ ಬದಲಾದರು. ಅದ್ದರಿಂದ ಈ ರಾಜಕಾರಣ ನಿರಂತರವಾಗಿ ನಡೀತಾನೆ ಇರುತ್ತೆ ಎಂದರು.

ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಏನೂ ಕೆಲಸ ಮಾಡಿಲ್ಲ, ಜನರು ಹಾಗೂ ಆಡಳಿತ ಪಕ್ಷದ ಶಾಸಕರೂ ಭ್ರಮನಿಸರನರಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಸಿಎಂ ಖುರ್ಚಿ ಮೇಲೆ ಕೂರಬೇಕೆಂಬ ಆಸೆ ಈಗ ಹೊರ ಹೊಮ್ಮುತ್ತಿದೆ. ಇದು ಸಹಜ ಪ್ರಕ್ರಿಯೆ ಎಂದು ಹೇಳಿದರು.

ಆರ್.ವಿ. ದೇಶಪಾಂಡೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರ್. ವಿ. ದೇಶಪಾಂಡೆ ಅವರ ಬಗ್ಗೆ ವ್ಯಾಖ್ಯಾನ ಮಾಡುವದಿಲ್ಲ ನಾನು ಸಣ್ಣವನು, ಅವರ ಹೇಳಿಕೆ ನಂತರ ಕಾಂಗ್ರೆಸ್ ನಲ್ಲಿ ಹಲವು ಪ್ರತಿಕ್ರಿಯೆ ಬಂದಿವೆ.ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವದಕ್ಕೆ ಕೈ ನಾಯಕರ ಪ್ರತಿಕ್ರಿಯೆ ಸಾಕ್ಷಿಯಾಗಿದೆ.

ಮುಡಾದಲ್ಲಿ ಹಗರಣ ಆಗಿಲ್ಲ ಅಂತಾರೆ.ಈಗ ಆ ಕಾಲದಲ್ಲಿದ್ದ ಕಮೀಷನರ್ ಅವರನ್ನು ಕಾರಣ ಕೊಟ್ಟು ಅಮಾನತು ಮಾಡಿದ್ದಾರೆ. ತಾಂತ್ರಿಕ‌ ಸಮಿತಿ ರಿಪೋರ್ಟ್ ಆಧಾರದಲ್ಲಿ ಅಮಾನತು ಮಾಡಲಾಗಿದೆ. ತಾಂತ್ರಿಕ ಸಮಿತಿಯ ತಪ್ಪನ್ನು ಕಂಡು ಹಿಡಿದಿದೆ. ಸರ್ಕಾರ ಕಮಿಷನರ್ ಅವರನ್ನು ಸಸ್ಪೆಂಡ್ ಮಾಡಿದೆ. ಎಲ್ಲವೂ ಕಾನೂನು ಬದ್ಧವಾಗಿ ನಡೆದಿಲ್ಲ ಎಂದಯ ಸರ್ಕಾರ ಒಪ್ಪಿಕೊಂಡಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!