ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣವೇ ಹಲವು ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಸಚಿವರ ವಿರುದ್ಧ ಶಾಸಕರು ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ಸಚಿವರ ಕಾರ್ಯವೈಖರಿ ಬಗ್ಗೆ ಹಲವು ಹಿರಿಯ ಶಾಸಕರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 136 ಶಾಸಕರ ಮೊಬೈಲ್ ಫೋನ್ ನಂಬರ್ ಇಟ್ಟುಕೊಳ್ಳುವುದು ಸಚಿವರಿಗೆ ಕಷ್ಟವೇ ಎಂದು ಸಂಸದರು ಪ್ರಶ್ನಿಸಿದರು. ಸಚಿವರ ಕಾರ್ಯವೈಖರಿ ಸುಧಾರಿಸುವಂತೆ ಶಾಸಕರು ಎಚ್ಚರಿಕೆ ನೀಡಿದ್ದಾರೆ.