ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕ ಮುಂದಾಗಿದೆ.
ಮಹಿಳೆಯರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಮಾಜಿ ಶಾಸಕಿ ಹಾಗೂ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.
ಜಾತಿ, ಧರ್ಮ ಅಥವಾ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದು ತಪ್ಪು. ಶಾಸಕ ಮುನಿರತ್ನ ಭಾಷಣದ ಆಡಿಯೋ ವೈರಲ್ ಆಗಿದ್ದು, ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗವನ್ನು ಒತ್ತಾಯಿಸುತ್ತೇವೆ ಎಂದರು.