ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಹತ್ವದ ಬೆಳವಣಿಗೆ ನಡೆದಿದಿದ್ದು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರಿದ್ದಾರೆ.
ಭಾನುವಾರ ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರಿಗೆ ಆಡಳಿತ ಸುಧಾರಣೆ, ಐಟಿ, ಗೃಹ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಗಳನ್ನು ಹೊಂದಿದ್ದ ಕೈಲಾಶ್ ಗಹ್ಲೋಟ್ ಅವರು ತಮ್ಮ ರಾಜೀನಾಮೆಯನ್ನು ದೆಹಲಿಯ ಸರ್ಕಾರದ ಮಂತ್ರಿ ಮಂಡಳಿಗೆ ಸಲ್ಲಿಸಿದ್ದರು.