February 14, 2026
Saturday, February 14, 2026
spot_img

ಜನರನ್ನು ಕಾಯಿಸುವುದೇ ಕೈಲಾಸ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಟೀಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ಯೋಜನೆಗಳನ್ನು ಸಾಧನೆ ಎಂದು ಹೇಳಿಕೊಳ್ಳುತ್ತಿದ್ದರೂ ಜನರಿಗೆ ತಲುಪುವ ಪ್ರಯೋಜನ ಕಡಿಮೆ ಎಂದು ಆರೋಪಿಸಿದರು.

ಪಂಚ ಗ್ಯಾರಂಟಿಗಳು ಈಗಾಗಲೇ ಪಂಚರ್ ಆಗಿವೆ ಎಂದು ವ್ಯಂಗ್ಯವಾಡಿದ ಅವರು, ಸರ್ಕಾರದ ಸಾಧನೆ ಎಂಬುದು ಕೇವಲ ಪ್ರಚಾರ ಮಾತ್ರ. ಸಾವಿರ ದಿನಗಳ ಸಾಧನೆ ಹೇಳಿಕೊಳ್ಳುವ ಸರ್ಕಾರ ಜನರನ್ನು ಕಾಯಿಸುವುದೇ ಕೈಲಾಸ ಮಾಡಿಕೊಂಡಿದೆ ಎಂದು ಟೀಕಿಸಿದರು.

ಇದನ್ನೂ ಓದಿ:

ಗೃಹಲಕ್ಷ್ಮಿ ಸೇರಿದಂತೆ ಹಲವು ಯೋಜನೆಗಳ ಹಣದ ಬಗ್ಗೆ ಸ್ಪಷ್ಟನೆ ಇಲ್ಲ, 5 ಸಾವಿರ ಕೋಟಿ ರೂಪಾಯಿ ಎಲ್ಲಿಗೆ ಹೋಯಿತು ಎಂಬುದಕ್ಕೆ ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಒತ್ತಾಯಿಸಿದರು. ವಾಲ್ಮೀಕಿ ನಿಗಮ, ಅಬಕಾರಿ ಹಾಗೂ ಇತರೆ ಹಗರಣಗಳನ್ನು ಉಲ್ಲೇಖಿಸಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ, ಮೂಲಸೌಕರ್ಯ ಸಮಸ್ಯೆಗಳು ಮುಂದುವರಿದಿವೆ ಎಂದು ಹೇಳಿದರು. ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !