ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೀಘ್ರದಲ್ಲೇ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭವಾಗಲಿದ್ದು ಅದರ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು ಎಂದು ಗುರುವಾರ ಕೇಂದ್ರ ಸರ್ಕಾರ ಹೇಳಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಹಿ ಹಾಕಲಾದ ಒಪ್ಪಂದದ ಚೌಕಟ್ಟಿನಡಿಯಲ್ಲಿ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.
ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು , ಕೈಲಾಸ ಮಾನಸ ಸರೋವರ ಯಾತ್ರೆಯ ಕುರಿತು ನಾವು ಶೀಘ್ರದಲ್ಲೇ ಸಾರ್ವಜನಿಕ ಪ್ರಕಟಣೆ ಹೊರಡಿಸುತ್ತೇವೆ ಮತ್ತು ಶೀಘ್ರದಲ್ಲೇ ಯಾತ್ರೆಯನ್ನು ಪುನರಾರಂಭಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಈ ವರ್ಷ ಯಾತ್ರೆ ನಡೆಯಲಿದೆ ಮತ್ತು ನಾವು ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತಿಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.