ಬೀಡಿ, ಗುಟ್ಕಾ ಬಂದ್‌ ಮಾಡಿದ್ದಕ್ಕೆ ಖದೀಮರು ಗರಂ: ಜೈಲಿನ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಲ್ಲಿನ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ.

ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದಾರೆ.

ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಚಾರ್ಜ್ ತೆಗೆದುಕೊಂಡ ದಿನವೆ ಕೈದಿಗಳ ಹೈ ಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು.

ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಮಂಗಳವಾರ ಪ್ರತಿಭಟನೆ ಮಾಡಿದ್ದರು. ಕಟ್ಟು ನಿಟ್ಟಿನ ರೂಲ್ಸ್ ವಿರುದ್ಧ ಕೇರಳಿದ ಕೈದಿಗಳಿಂದ ಬಂದ ಬೆದರಿಕೆ ಆಡಿಯೋನಾ? ಹತ್ಯೆಗೆ ಸಂಚು ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!