RECRUITMENT | ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ 60 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ ಮತ್ತು ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :
ಪಿಯುಸಿ, ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :
ಮಾರ್ಚ್‌ 25,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ :
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌, ಪ್ರಾಯೋಗಿಕ ಪರೀಕ್ಷೆ, ಕಂಪ್ಯೂಟರ್‌ ಜ್ಞಾನ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :
ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌/ಚಲನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!