ಫೆ.5ರಂದು ಕಲಬುರಗಿ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ

ಹೊಸದಿಗಂತ ವರದಿ, ಕಲಬುರಗಿ:

ಕಲಬುರಗಿ ಮಹಾ ನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್‌ ಆಯ್ಕೆಗೆ ಫೆ.05ರಂದು ಚುನಾವಣಾ ನಡೆಸಲು ಮುಹೂರ್ತ ಪಿಕ್ಸ್ ಮಾಡಿ ಕಲಬುರಗಿ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ ಆದೇಶ ಹೊರಡಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ಮೇಯರ್ ಸ್ಥಾನವು ಪರಿಶಿಷ್ಟ ಜಾತಿ, ಉಪ ಮೇಯರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿದ್ದು, ನಾಲ್ಕು ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆಯನ್ನು ಫೆ.05ರಂದು ನಡೆಸಲು ತೀರ್ಮಾನಿಸಲಾಗಿದೆ. ಕಲಬುರಗಿ ಮಹಾ ನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್ ಹಾಲ್) ಸಭಾಂಗಣದಲ್ಲಿ ಜರುಗಿಸಲು ನಿರ್ಧರಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಪಾಲಿಕೆ ಮೀಸಲಾತಿ ಹಠಾತ್ ಬದಲಾವಣೆ: ತೀವ್ರ ಕುತೂಹಲ ಕೆರಳಿಸಿರುವ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳ ಮೀಸಲಾತಿ ಮತ್ತೊಮ್ಮೆ ಬದಲಾವಣೆಯಾಗಿದೆ. ಹಠಾತ್ ಆಗಿ ಮೀಸಲು ಬದಲಾವಣೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ, ಈ ಮೂಲಕ ಮತ್ತೊಂದು ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಮೇಯರ್ ಹುದ್ದೆಯನ್ನು ಎಸ್ಸಿ ಹಾಗೂ ಉಪ ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲು ನಿಗದಿಪಡಿಸಲಾಗಿದೆ. 21ನೇ ಅವಧಿಯ ಮೀಸಲಾತಿ ಇದಾಗಿದ್ದು, 2018ರಲ್ಲಿ ನಿಗಧಿಪಡಿಸಿದ ಮೀಸಲಾತಿಯಂತೆ ಮೇಯರ್ ಚುನಾವಣೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಯ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ. ಈ ಹಿಂದೆ ಸಾಮಾನ್ಯ ಮಹಿಳೆಗೆ ಮೇಯರ್ ಹುದ್ದೆ ಮೀಸಲಾಗಿತ್ತು. ಅದಕ್ಕೂ ಮೊದಲು ಎಸ್ಟಿಗೆ ಇತ್ತು ಎಂದು ಹೇಳಲಾಗಿತ್ತು.

ಕಲಬುರಗಿ ಪಾಲಿಕೆ ಜತೆಗೆ ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮೀಸಲಾತಿಗೂ ಸಹ ಇದೇ ನಿಯಮ ಪಾಲಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಪಾಲಿಕೆ ಆಯುಕ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!