ಕಲಬುರಗಿ ಮಹಾ ನಗರ ಪಾಲಿಕೆ ವಿಜೇತನ ಸದಸ್ಯತ್ವ ಅಸಿಂಧು

ಹೊಸ ದಿಗಂತ ವರದಿ, ಕಲಬುರಗಿ:

ಕಲಬುರಗಿ ಮಹಾ ನಗರ ಪಾಲಿಕೆಯ ವಾಡ೯ ನಂ-36ರ ವಿಜೇತ ಅಭ್ಯರ್ಥಿ ಆಯ್ಕೆ ಅಸಿಂಧುವಾಗಿದೆ ಎಂದು ಕಲಬುರಗಿ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

ಪಾಲಿಕೆ ವಿಜೇತ ಅಭ್ಯರ್ಥಿ ಶಂಭುಲಿಂಗ ಬಳಬಟ್ಟಿ ಆಯ್ಕೆ ಅಸಿಂಧುಗೊಂಡಿದೆ. ಸುಳ್ಳು ಅಫಿಡವಿಟ್ ಸಲ್ಲಿಸಿದ್ದರಿಂದ ಆಯ್ಕೆ ಅಸಿಂಧುವಾಗಿದೆ.

ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಆಸ್ತಿ, ವಿದ್ಯಾಹ೯ತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಬಿಜೆಪಿಯ ಅಭ್ಯರ್ಥಿ ಸೂರಜ್ ತಿವಾರಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ,ಶಂಭುಲಿಂಗ ಬಳಬಟ್ಟಿ ಜಯಗಳಿಸಿದ್ದರು.

ಪಾಲಿಕೆ ಚುನಾವಣೆಯಲ್ಲಿ ಗೆದ್ದರೂ ಸಹ ಇನ್ನೂ ಅಧಿಕಾರ ಸ್ವೀಕಾರ ಆಗದೇ ಇರುವುದು. ಕಲಬುರಗಿ ಮಹಾ ನಗರ ಪಾಲಿಕೆಯ ಪ್ರಸ್ತುತ ಸಂಗತಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!