ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ ಪೊಲೀಸರು!

ಹೊಸ ದಿಗಂತ ವರದಿ, ಕಲಬುರಗಿ:

ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಕಲಬುರಗಿ ನಗರ ಪೊಲೀಸರು ಬುಧವಾರ ದಿಢೀರ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ್ ಅನಿರೀಕ್ಷಿತ ದಾಳಿಯಿಂದ, ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಬಯಲಾಗಿವೆ. ದಾಳಿ ವೇಳೆ 4 ಮೊಬೈಲ್, 4 ಸಿಮ್ ಕಾರ್ಡ್ ಮತ್ತು 1,62,000 ಲಕ್ಷ ರೂಪಾಯಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಜೈಲಿನ ಒಳಗೆ ಮೊಬೈಲ್, ದುಡ್ಡು ಬಂದಿರುವುದು ಹೇಗೆ ಎಂದು ಕಲಬುರಗಿ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!