ಸ್ಮಾರ್ಟ್‌ ಸಿಟಿಯಾಗಲಿದೆ ಕಲಬುರಗಿ, ಇದಕ್ಕಾಗಿ 1685 ಕೋಟಿ ರೂ ಮೀಸಲು ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್​ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್​​ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನಾ ಹಂತದಲ್ಲಿದೆ. ಇಂದಿರಾ ಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!