Thursday, February 9, 2023

Latest Posts

‘ಕಳಸಾ ಬಂಡೂರಿ’ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ : ಸಚಿವ ಕಾರಜೋಳ ಹರ್ಷ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ತಿಳಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ನಾಲೆ ಆಗಬೇಕೆಂದು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಇಡಿ ಡಿಪಿಆರ್ ಅನ್ನು ಪರಿಷ್ಕರಿಸಿದ್ದೇವೆ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಮಗೆ ಜೊತೆ ಸಾಥ್ ನೀಡಿದ್ದರು. ಉತ್ತರ ಕರ್ನಾಟಕದ ಬೆಳಗಾವಿಯಲ್ಲಿಯೇ ಅಧಿವೇಶನ ನಡೆದಿರುವಾಗಲೇ ಕಳಸಾ ಬಂಡೂರಿ ನಾಲೆ ಯೋಜನೆಗೆ ಕೇಂದ್ರ ಅನುಮತಿ ನೀಡಿರುವುದು ಸಂತೋಷವಾಗಿದೆ. ಇದಕ್ಕೆ ಕಾರಣರಾದ ನಾಯಕರು ಹಾಗೂ ಅಧಿಕಾರಿಗಳು, ಹೋರಾಟಗಾರರಿಗೆ ಅಭಿನಂದನೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!